ಮೈಸೂರು : ಮೇಯಲು ಕಟ್ಟಿ ಹಾಕಿದ್ದ ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಇದರಿಂದ ಸಿಟ್ಟಿಗೆದ್ದ ರೈತರು ಪ್ರತಿಭಟನೆ ಮಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ ನಡೆದಿದೆ.
ಹಳೇವಾರಂಚಿಯ ಮುನ್ನಾ ಎಂಬುವರಿಗೆ ಸೇರಿದ ಎತ್ತು. ಗುರುಪುರ ಕೆರೆ ಬಳಿ ಜಾನುವಾರುಗಳನ್ನು ಮೇಯಲು ಕಟ್ಟಿ ಹಾಕಿದ್ದ ವೇಳೆ ಹುಲಿ ದಾಳಿ ಮಾಡಿದೆ. ಇದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಟ್ರ್ಯಾಕ್ಟರ್‌ನಲ್ಲಿ ಎತ್ತಿನ ಶವ ತಂದು ಹುಲಿ ಸೆರೆ ಹಿಡಿಯಲು ಅರಣ್ಯಾ ಇಲಾಖೆಯ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ : ನವವಿವಾಹಿತೆ ಗಾನವಿ ಸೂಸೈಡ್ ಕೇಸ್ಗೆ ಬಿಗ್ ಟ್ವಿಸ್ಟ್ | ಪತ್ನಿ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಪತಿ ಸೂರಜ್!



















