ಮೈಸೂರು : ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಹುಲಿ ಸೆರೆಯಾಗಿದೆ.
ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯು, ತಡರಾತ್ರಿ ತಾಯಿ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಗ್ರಾಮದ ಹೊರವಲಯದ ಹೊಲದ ಮಧ್ಯದಲ್ಲಿ ಅಡಗಿ ಕುಳಿತಿದ್ದ ಹುಲಿಗೆ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲು ಅರಣ್ಯ ಇಲಾಖೆ ಚಿಂತಿಸಿದೆ. ಮರಿ ಹುಲಿಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಲ್ಕು ಆನೆಗಳೊಂದಿಗೆ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಿಬ್ಬಂದಿಯಿಂದ ಕಾರ್ಯಾಚರಣೆ ಮುಂದುವರೆಸಿದೆ.
ಇದನ್ನೂ ಓದಿ : ಡಿ. 4, 5 ಭಾರತಕ್ಕೆ ಬರಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್



















