ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಅರಣ್ಯ ಇಲಾಖೆಯಿಂದ ಅಳವಡಿಸಿದ್ದ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.
ಭಾರತಿಬೈಲು ಗ್ರಾಮ, ಬಿ ಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಹುಲಿ ಆತಂಕ ಸೃಷ್ಟಿ ಮಾಡಿದೆ. ಹೊಸಹಳ್ಳಿ ಗ್ರಾಮದ ಸರ್ವೆ ನಂಬರ್ 212 ರಲ್ಲಿ ಜಾನುವಾರುಗಳ ಮೇಲೆ ದಾಳಿಯಾಗಿದ್ದ ಬೆನ್ನಲ್ಲೇ ಅರಣ್ಯ ಇಲಾಖೆ ಕ್ಯಾಮರಾ ಅಳವಡಿಸಿತ್ತು.
ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅರಣ್ಯಾ ಇಲಾಖೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು | ಗಿಳಿಯನ್ನು ರಕ್ಷಿಸಲು ಹೋಗಿ ದುರಂತ ಅಂತ್ಯಕಂಡ ಯುವಕ



















