ದಾವಣಗೆರೆ: ಭಾರತ ಮತ್ತು ಪಾಕ್ ಮಧ್ಯೆ ಯುದ್ಧ ಭೀತಿ ಹಿನ್ನಲೆಯಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಭಾರೀ ಭದ್ರತೆ ನೀಡಲಾಗಿದೆ.
ರೈಲ್ವೆ ಸ್ಟೇಷನ್ ನಲ್ಲಿ ಡಾಗ್ ಸ್ಕ್ಯಾಡ್ ಬಾಂಬ್ ನಿಷ್ಕ್ರಿಯ ದಳ ಪೂರ್ತಿ ಅಲರ್ಟ್ ಆಗಿದ್ದಾರೆ. ರೈಲ್ವೆ ನಿಲ್ದಾಣಕ್ಕೆ ಬರುವ ಪ್ರತಿಯೊಬ್ಬರನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಬ್ಯಾಗ್ ಪರಿಶೀಲನೆ ಮಾಡುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಮೆಟೆಲ್ ಡಿಟೆಕ್ಟರ್ ಕೂಡ ಆ್ಯಕ್ಟಿವ್ ಆಗಿದ್ದು, ಮುಂಜಾಗ್ರತಾ ಕ್ರಮವಾಗಿ ಭಾರೀ ಭದ್ರತೆ ನೀಡಲಾಗಿದೆ..