ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಇಂದು ಎಸ್ ಐಟಿ ವಿಚಾರಣೆಗೆ ಆಗಮಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ನಲ್ಲಿ ಬಿಜೆಪಿಯ ಬಿಎಲ್ ಸಂತೋಷ್ ವಿರುದ್ಧ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಬ್ರಹ್ಮಾವರ ಪೊಲೀಸರು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಪೊಲೀಸರನ್ನು ಒಳಗಡೆ ಬಿಟ್ಟಿರಲಿಲ್ಲ. ತಿಮರೋಡಿ ಬೆಂಬಲಿಗರು ಒಳಗಡೆ ಬಿಡದೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಹೀಗಾಗಿ ಜಯಂತ್, ಗಿರೀಶ್ ಮಟ್ಟಣ್ಣೆವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ 30 ಜನರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿ -3 ಅಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಇದೇ ಪ್ರಕರಣದ ವಿಚಾರಣೆಗೆ ಮಹೇಶ ಶೆಟ್ಟಿ ತಿಮರೋಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.