ಕುಂದಾಪುರ: ಮರಳು ತುಂಬಿದ ಟಿಪ್ಪರ್ ಲಾರಿ, ಹೊಂಡಾ ಅಕ್ಟಿವಾ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ.
ಕೋಟೇಶ್ವರ ಕಡೆ ತೆರಳುತ್ತಿದ್ದ ಕೃಷ್ಣಮೂರ್ತಿ ಅಡಿಗ ಬೀಜಾಡಿ ಮೃತ ದುರ್ದೈವಿ. ಮರಳು ತುಂಬಿದ ಟಿಪ್ಪರ್ ವಾಹನ ಕೂಡಾ ಕೋಟೇಶ್ವರ ಕಡೆ ಹೋಗುತ್ತಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆರ ಬೈಕ್ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಕೃಷ್ಣ ಮೂರ್ತಿ ಅಡಿಗ ಅಡುಗೆ ವೃತ್ತಿಯವರಾಗಿದ್ದು ಅಲೂರಿನಲ್ಲಿ ಅಡುಗೆ ಕಾರ್ಯದ ನಿಮಿತ್ತ ಸಿದ್ಧತೆಯಲ್ಲಿ ಇದ್ದರು. ವಾರದ ಹಿಂದೆ ಖರೀದಿಸಿದ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಮನೆಯಿಂದ ಹೊರಟವರು ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ತಿರುಗಿದಾಗ ಯಮರೂಪಿ ಟಿಪ್ಪರ್ ಗುದ್ದಿದೆ. ಈ ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಅವರು ರಸ್ತೆಯಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು | ಇಬ್ಬರು ಸಜೀವ ದಹನ



















