ಮಂಡ್ಯ: ಇತ್ತೀಚೆಗೆ ಸಾಲ ನೀಡಿ, ವಸೂಲಿಗೆ ಕಿರಿಕುಳ ನೀಡುತ್ತಿರುವ ವಿಷಯ ಬೆಳಕಿಗೆ ಬರುತ್ತಿದ್ದು, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳದಿಂದ (Meter Interest Torture) ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಕೆ.ಆರ್.ಪೇಟೆಯ ವಳಗೆರೆ ಮೆಣಸ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೋಹಿತ್ (35) ಸಾವನ್ನಪ್ಪಿರುವ ದುರ್ದೈವಿ. ಲೋಹಿತ್ ಖಾಸಗಿ ವ್ಯಕ್ತಿಗಳಿಂದ ಮೀಟರ್ ಬಡ್ಡಿಗೆ ಸಾಲ (Loan) ಪಡೆದಿದ್ದ. ಸುಮಾರು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಹೀಗಾಗಿ ಲಕ್ಷ ಲಕ್ಷ ಬಡ್ಡಿ ಕಟ್ಟುತ್ತಿದ್ದ. ಆದರೂ ಹಣ ನೀಡಿದವು ಬಡ್ಡಿಗಾಗಿ ಕಿರುಕುಳ ನೀಡುತ್ತದ್ದರು ಎನ್ನಲಾಗಿದೆ.
ಮೈಕ್ರೋ ಫೈನಾನ್ಸ್ ಸಾಲಗಾರರ ಕಾಟ ಕೂಡ ಯುವಕನಿಗೆ ಇತ್ತು ಎನ್ನಲಾಗಿದೆ. ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ದಂಧೆಕೋರರ ಕಾಟಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.