ಸಾಲದಿಂದ ಬೇಸತ್ತು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ಈ ಘಟನೆ ನಡೆದಿದೆ. ಕಲಾಲ್ ದತ್ತ(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸೋಮವಾರ ಸಂಜೆ ಕಲಾಲ್ ದತ್ತ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಕಲಾಲ್, ಬಡ್ಡಿ ರೂಪದಲ್ಲಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಆದರೆ, ಬಡ್ಡಿ ಟಾರ್ಚರ್ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಸೆಂಟ್ ಜೋಸೆಫ್ ಆಸ್ಪತ್ರೆಗೆ ಮೃತದೇಹ ಕಳುಹಿಸಲಾಗಿದೆ.