ಹಾಸನ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಗರ ನಿವಾಸಿ ಪ್ರಮೋದ್(35) ಆತ್ಮಹತ್ಯೆ ಮಾಡಿಕೊಂಡಿರುವ ಟೆಕ್ಕಿ. ಕೌಟುಂಬಿಕ ಕಲಹದಿಂದ ಬೇಸತ್ತು ಇಂಜಿನಿಯರ್ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಮೋದ್ ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರಮೋದ್ ಹಾಗೂ ಪತ್ನಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಅಲ್ಲದೇ, ಇದರೊಂದಿಗೆ ಪತ್ನಿಯ ಆಕೆಯ ಸಹೋದರರು ಕೂಡ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಮೋದ್ ಡಿ. 29ರಂದೇ ಮನೆ ಬಿಟ್ಟು ಹೋಗಿದ್ದರು. ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದ್ದರು. ಕೊನೆಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಕೆ.ಆರ್.ಪುರಂ ಪೊಲೀಸ್ ಠಾಣೆಗೆ ಕಾಣೆಯಾಗಿರುವ ಕುರಿತು ದೂರು ನೀಡಿದ್ದರು. ಅಂದು ರಾತ್ರಿ ಹೇಮಾವತಿ ನದಿಯ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ಇದನ್ನು ಕಂಡು ಪರಿಶೀಲನೆ ನಡೆಸಿದಾಗ ನದಿಗೆ ಹಾರಿರುವ ಸಂಗತಿ ಬಯಲಿಗೆ ಬಂದಿದೆ.
ಗಂಡನ ಶವ ನೋಡಲು ಬಂದ ಪತ್ನಿ ವಿರುದ್ದ ಪ್ರಮೋದ್ ಕುಟುಂಬ ಸದಸ್ಯರ ಆಕ್ರೋಶ ಹೊರಹಾಕಿದ್ದು, ಸ್ಥಳದಲ್ಲಿ ಹೈಡ್ರಾಮಾ ನಡೆಯಿತು. ಆಗ ಪತ್ನಿ ಹಾಗು ಆಕೆ ತಾಯಿಯನ್ನು ಪೊಲೀಸರು ರಕ್ಷಿಸಿ ಕರೆದೊಯ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ..