ತಿರುಪತಿಯಲ್ಲಿ ಪ್ರಸಾದವಾಗಿ ನೀಡುವ ಲಡ್ಡುದಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಪತ್ತೆಯಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಈ ಕುರಿತು ತನಿಖೆ ನಡೆಸಲು ಎಸ್ ಐಟಿ ರಚಿಸಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆದೇಶ ಹೊರಡಿಸಿದ್ದಾರೆ.
ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಸಿದ ಆರೋಪದ ತನಿಖೆ ನಡೆಸುವುದಕ್ಕಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ. ಈಗಾಗಲೇ ತುಪ್ಪ ಕಲಬೆರಕೆ ಮತ್ತು ಕೈಗೊಂಡಿರುವ ಕ್ರಮಗಳ ವರದಿಯ ಪ್ರತಿಯನ್ನು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಟಿಟಿಡಿ ಸಲ್ಲಿಸಿದೆ. ವರದಿಯ ನಂತರ ಸಿಎಂ ಚಂದ್ರಬಾಬು ನಾಯ್ಡು, ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ.
ಅಲ್ಲದೇ, ತುಪ್ಪ ಉತ್ಪಾದನಾ ವ್ಯವಸ್ಥೆಯನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ನೀಡಲು ವಿಶೇಷ ಸಮಿತಿ ರಚಿಸಲಾಗಿದೆ. ಸಮಿತಿಯು ಪವಿತ್ರ ಪ್ರಸಾದವನ್ನು ತಯಾರಿಸಲು ಬಯಸಿದ ರುಚಿ, ಪರಿಮಳ ಮತ್ತು ಸಂವೇದನಾ ಗುಣಗಳೊಂದಿಗೆ ಶುದ್ಧ ಹಸುವಿನ ತುಪ್ಪವನ್ನು ಸಂಗ್ರಹಿಸುವುದನ್ನು ಖಚಿತಪಡಿಸುತ್ತದೆ.