ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತ ಅರ್ಜಿ ವಜಾಗೊಂಡಿದೆ.
ಸಾಮಾಜಿಕ ಕಾರ್ಯಕರ್ತ ಮತ್ತು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಘಟನೆಯ ಅಧ್ಯಕ್ಷ ಕೆ.ಎ.ಪಾಲ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪಾಲ್ ಅವರೇ ವಾದ ಮಂಡಿಸಿದ್ದರು. ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿಗಳಾದ ಬಿ.ಆರ್. ವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದೆ.
ನೀವು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದರೆ ನಾವು ಎಲ್ಲಾ ದೇವಾಲಯಗಳು, ಗುರುದ್ವಾರಗಳು ಹಾಗೂ ಇತ್ಯಾದಿ ಪುಣ್ಯ ಸ್ಥಳಗಳಿಗೆ ಪ್ರತ್ಯೇಕ ರಾಜ್ಯಗಳನ್ನು ರಚಿಸಬೇಕಾಗುತ್ತದೆ. ನಿರ್ಧಿಷ್ಟ ಧರ್ಮಕ್ಕಾಗಿ ನಾವು ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.