ಮೈಸೂರು: ತಂಬಾಕು ಹದಗೊಳಿಸುವ ವೇಳೆ ಆಕಶ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಬೆಂಕಿ ತಗುಲಿ ಬ್ಯಾರೇನ್ ಸಂಪೂರ್ಣ ಭಸ್ಮವಾಗಿದೆ. ಸಾಲಿಗ್ರಾಮದ ಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ವಿಶ್ವೇಶ್ವರಯ್ಯ ಎಂಬುವವರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರೇನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಸುಮಾರು 5 ಲಕ್ಷ ರೂ. ನಷ್ಟವಾಗಿದೆ. ಗುರುವಾರ ಬೆಳಗಿನ ಜಾವ 5 ಗಂಟೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ಕಟ್ಟೆಮಳಲವಾಡಿ ವಿಭಾಗದ ತಂಬಾಕು ಮಂಡಳಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.