ಧರ್ಮಶಾಲಾ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಇಂದು ಧರ್ಮಶಾಲಾದಲ್ಲಿ ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದುಕೊಂಡಿವೆ. ಕಟಕ್‌ನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 101 ರನ್ಗಳಿಂದ ಬೃಹತ್ ಗೆಲುವು ಸಾಧಿಸಿದರೆ, ದಕ್ಷಿಣ ಆಫ್ರಿಕಾ ಎರಡನೇ ಪಂದ್ಯವನ್ನು 51 ರನ್ಗಳಿಂದ ಗೊದ್ದುಕೊಂಡಿತು. ಇದೀಗ ಸರಣಿಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದೊಂದಿಗೆ ಉಭಯ ತಂಡಗಳು ಕಣಕ್ಕಿಳಿಯುತ್ತಿವೆ.
ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನ್ನು ಕಂಡಬೆನ್ನಲ್ಲೆ ಇಂದಿನ ಪಂದ್ಯದಲ್ಲಿ ಪ್ಲೇಯಿಂಗ್ 11ರಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ದಕ್ಷಿಣ ಆಫ್ರಿಕಾ ಸಹ ಒಂದು ಬದಲಾವಣೆಯೊಂದಿಗೆ ಮೈದಾನಕ್ಕೆ ಪ್ರವೇಶಿಸಬಹುದು.
ಮೂರನೇ ಟಿ20 ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಬಹುದು. ಸಂಜು ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಬಹುದು. ತಂಡದಿಂದ ಶುಭಮನ್ ಗಿಲ್ ಅಥವಾ ಜಿತೇಶ್ ಶರ್ಮಾ ಹೊರಗುಳಿಯಬಹುದು. ದಕ್ಷಿಣ ಆಫ್ರಿಕಾ ತಂಡವು ತಮ್ಮ ಹಿಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ರೀಜಾ ಹೆಂಡ್ರಿಕ್ಸ್ ಕಳಪೆ ಪ್ರದರ್ಶನ ನೀಡಿದ್ದರು. ಈ ಹಿನ್ನೆಲೆ ಹೆಂಡ್ರಿಕ್ಸ್ ಸ್ಥಾನದಲ್ಲಿ ರಯಾನ್ ರಿಕಲ್ಟನ್ ಕಣಕ್ಕಿಳಿಯಬಹುದು.
ಪಿಚ್ ವರದಿ :
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಇದುವರೆಗೆ ಮೂರು ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಎರಡರಲ್ಲಿ ಗೆದ್ದು ಒಂದರಲ್ಲಿ ಸೋಲನ್ನು ಕಂಡಿದೆ. ಈ ಮೈದಾನದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2015ರಲ್ಲಿ ಟಿ20 ಪಂದ್ಯವನ್ನು ಆಡಿದ್ದವು. ಹರಿಣ ಪಡೆ ಏಳು ವಿಕೆಟ್‌ಗಳಿಂದ ಗೆದ್ದಿತು.
ಮೂರನೇ ಟಿ20 ಪಂದ್ಯ ಪ್ರಸಾರ ಎಲ್ಲಿ?
ಟಿ20 ಸರಣಿಯ ಮೂರನೇ ಪಂದ್ಯವು ಇಂದು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ನಲ್ಲಿ ಪಂದ್ಯವನ್ನು ನೇರಪ್ರಸಾರ ಮಾಡಲಾಗುತ್ತದೆ. ಲೈವ್ ಸ್ಟ್ರೀಮಿಂಗ್ ಜಿಯೋಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.
ಇದನ್ನೂ ಓದಿ : ಸಿಡ್ನಿಯ ಬೋಂಡಿ ಬೀಚ್ನಲ್ಲಿ ದುಷ್ಕರ್ಮಿಗಳಿಂದ ಭೀಕರ ಗುಂಡಿನ ದಾಳಿ | 10 ಮಂದಿ ಸಾವು



















