ಬೆಂಗಳೂರು: ಇಂದು ಐತಿಹಾಸಿಕ ಕರಗ ಮಹೋತ್ಸವ ನಗರದಲ್ಲಿ ನಡೆಯಲಿದೆ. ಹೀಗಾಗಿ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.
ಇಂದು ರಾತ್ರಿ 12.30ಕ್ಕೆ ದ್ರೌಪದಿ ದೇವಿಯ ಕರಗ ಮಹೋತ್ಸವ ನಡೆಯಲಿದೆ. ವಿಶ್ವ ವಿಖ್ಯಾತ ಕರಗ ಮಹೋತ್ಸವಕ್ಕೆ ಈ ಬಾರಿಯೂ ಸಿಎಂ ಹಾಗೂ ಡಿಸಿಎಂ ಭಾಗಿಯಾಗುವ ಸಾಧ್ಯತೆ ಇದೆ. ಕರಗ ಮಹೋತ್ಸವ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಡಿಸಿಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕರಗ ಮಹೋತ್ಸವ ಇರುವ ಹಿನ್ನೆಲೆಯಲ್ಲಿ ಧರ್ಮ ರಾಮಸ್ವಾಮಿ ದೇವಸ್ಥಾನ ನವ ವಧುವಿನಂತೆ ಶೃಂಗಾರಗೊಂಡಿದೆ. ವಿದ್ಯುತ್ ದೀಪ, ಹೂಗಳಿಂದ ಅಲಂಕಾರಗೊಂಡಿದೆ. ಕರಗ ಸಾಗುವ ದಾರಿ ಉದ್ದಕ್ಕೂ ಲೈಟಿಂಗ್, ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಈ ಬಾರಿಯೂ ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಎಂದಿನಂತೆ ಈ ಬಾರಿ ಕೂಡ ಮಾಸ್ತನ್ ದರ್ಗಾಕ್ಕೆ ಕರಗ ಹೋಗಲದೆ. ಕರಗ ಕಣ್ಣು ತುಂಬಿಕೊಳ್ಳಲು ಸಿಟಿ ಮಂದಿ ಕಾತುರದಿಂದ ಕಾಯುತ್ತಿದ್ದಾರೆ.