ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ 9 ವರ್ಷ ತುಂಬಿದೆ. ಹೌದು, 2017ರ ಫೆಬ್ರವರಿ 9 ರಂದು ತಮ್ಮ ಹುಟ್ಟೂರಾದ ಕುಂದಾಪುರದಲ್ಲಿಯೇ ನಡೆದ ಅದ್ದೂರಿ ಮದುವೆ ಸಮಾರಂಭ ನಡೆದಿತ್ತು. ಇಂದು ಈ ದಂಪತಿಗೆ ಮದುವೆ ವಾರ್ಷಿಕೋತ್ಸವದ ಸಂಭ್ರಮ.

ಈ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಫೋಟೋಗಳನ್ನು ಹಂಚಿಕೊಂಡು, ಮಡದಿಗೆ ಪ್ರೀತಿಯಿಂದ ವಿಶ್ ಮಾಡಿದ್ದಾರೆ. “ಬಂಧ ಬೆಸೆದು, ಚಂದ ಹೊಸೆದು ಒಂದಾದ ಒಲವಿನ ದಾಂಪತ್ಯಕ್ಕಿಂದು ಒಂಭತ್ತು ತುಂಬಿದೆ. ಹಿಂದೆ ನೋಡಿದರೆ ಜೊತೆ ಕಳೆದ ಪ್ರತಿ ಗಳಿಗೆಯೂ ಸಿಹಿ ನೆನಪಿನ ನಿಕ್ಷೇಪಗಳಾಗಿವೆ. ಅಲ್ಲಿ ನಲಿವಿದೆ, ನೋವಿದೆ, ನಗುವಿದೆ, ಸರಸವಿರಸಗಳಿವೆ.. ಎಲ್ಲವನ್ನು ತೂಗುವ ಸಮರಸವಿದೆ.. ಎಲ್ಲಕ್ಕೂ ಮಿಗಿಲಾಗಿ ಕೊನೆಯಾಗದ ಒಲವಿದೆ.. ಅ ಒಲವು ಬೀರಿದ ಬೆಳಕು, ತಂದ ನೆಮ್ಮದಿ, ತುಂಬಿದ ಆತ್ಮವಿಶ್ವಾಸಗಳೇ ಇಂದು ನನ್ನನ್ನು ನಾನಾಗಿಸಿದೆ” ಎಂದು ಹೇಳಿದ್ದಾರೆ.

ನನ್ನನ್ನು ಮುನ್ನಡೆಸುವ ಚಾಲಕ ಶಕ್ತಿಗೆ, ನಾನು ಸದಾ ನಂಬಿರುವ ನನ್ನ ಬೆಂಬಲಕ್ಕೆ… ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ನೀನು ನನ್ನ ಕೈ ಹಿಡಿದು ಜೊತೆಗಿದ್ದಾಗ ಈ ಬದುಕು ಇನ್ನಷ್ಟು ಸುಂದರವೆನಿಸುತ್ತದೆ. ಹ್ಯಾಪಿ ವೆಡ್ಡಿಂಗ್ ಆನಿವರ್ಸರಿ ಎಂದಿದ್ದಾರೆ ರಿಷಬ್ ಶೆಟ್ಟಿ.



















