ನಾಳೆ ನಾನು ಡಿನ್ನರ್ ಮಾತ್ರ ಕೊಡುತ್ತಿದ್ದೇನೆ. ಡಿನ್ನರ್ ಪಾರ್ಟಿ ಅಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಾವು ಎಸ್ಸಿ, ಎಸ್ಟಿ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಎಲ್ಲ ಎಸ್ಸಿ-ಎಸ್ಟಿ ಸಮುದಾಯದ ಸಚಿವರು, ಶಾಸಕರನ್ನ ಕರೆದಿದ್ದೇವೆ. ಪಕ್ಷದ ವ್ಯಾಪ್ತಿಯಲ್ಲೇ ಅನುಮತಿ ಪಡೆದು ಸಭೆ ನಡೆಸುತ್ತೇವೆ. ನಾಳೆ ಸಂಜೆ 7 ಗಂಟೆಗೆ ಈ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.
ಎಸ್ಸಿ, ಎಸ್ಟಿ ಬಿಟ್ಟು ಬೇರೆ ನಾಯಕರಿಗೆ ಆಹ್ವಾನ ಇಲ್ಲ, ಅವರು ಬರುವುದು ಬೇಡ ಅಂತಲ್ಲ. ಹಿಂದೆ ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿ ಸಮಾವೇಶ ನಡೆಯಿತು. ಆ ಸಮಾವೇಶದಲ್ಲಿ ಕೆಲವು ರೆಸೊಲ್ಯುಷನ್ಸ್ ತೆಗೆದುಕೊಳ್ಳಲಾಗಿತ್ತು. ಅದರ ಬಗ್ಗೆಯೂ ನಾಳೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.