ಪೂಂಚ್ ಜುಲೈ 19 : ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ರಣಭೀಕರ ಮಳೆ ಇಂದು ಕೂಡ ಮುಂದುವರಿದಿದ್ದು, ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ.
ಈ ನೈಸರ್ಗಿಕ ವಿಕೋಪಕ್ಕೆ ಒಟ್ಟು 10ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಹಲವು ಜನರು ನಾಪತ್ತೆಯಾಗಿದ್ದಾರೆ. ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿದ್ದು, ನಾಪತ್ತೆಯಾದವರ ಹುಡುಕಾಟ ಮತ್ತು ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಲಾಗಿದೆ.
ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಭೂಕುಸಿತ ಮತ್ತು ಮನೆಗಳು ಕುಸಿದು ಬಿದ್ದಿದೆ. ಪೂಂಚ್‌ನ ಸುರನ್‌ಕೋಟ್ ತಹಸಿಲ್ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಇಲ್ಲಿಯೇ ಅತಿ ಹೆಚ್ಚು ಸಾವುನೋವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 23ರವರೆಗೆ ಭಾರಿ ಮಳೆಯ ಮುನ್ಸೂಚನೆ:
ಭಾರತೀಯ ಹವಾಮಾನ ಇಲಾಖೆ (IMD) ಜುಲೈ 23ರವರೆಗೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಪತ್ತು ನಿರ್ವಹಣಾ ಪಡೆಗಳನ್ನು (SDRF, NDRF) ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ.
ಇದನ್ನೂ ಓದಿ : ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ‘ನೋ’ ಎಂದ ಆ್ಯಂಡಿ ಫ್ಲವರ್ – ಆರ್‌ಸಿಬಿಗೇ ಮೊದಲ ಆದ್ಯತೆ