ಬೆಂಗಳೂರು : ಬೈಕ್ ಸವಾರನಿಗೆ ಹಲ್ಲೆ ಮಾಡಿದ್ದ ಸಂಚಾರಿ ಪೊಲೀಸ್ ಒಬ್ಬರನ್ನು ಅಮಾನತು ಮಾಡಲಾಗಿದೆ. ರಸ್ತೆಬದಿಯಲ್ಲಿ ನಡೆದ ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಂಚಾರಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಸಾರ್ವಜನಿಕರ ಮುಂದೆ ಪೊಲೀಸ್ ಅಧಿಕಾರಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಧಿಕಾರ ದುರುಪಯೋಗದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಂಚಾರಿ ಡಿಸಿಪಿ, ಸವಾರನಿಗೆ ಕ್ಷುಲ್ಲಕ ಕಾರಣಕ್ಕೆ ಕಪಾಳಮೋಕ್ಷ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರೆ. ಈ ಘಟನೆ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ವಾಗ್ವಾದ ನಡೆದಿದೆ.