ನೆಲಮಂಗಲ : ತಾಯಿಯ ಫೋಟೋ ಶೂಟ್ ವೇಳೆ ಮೂರು ವರ್ಷದ ಮಗು ನೀರಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲ್ಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಿಡ್ಡೆನಹಳ್ಳಿಯಲ್ಲಿ ಘಟನೆ ನಡೆದಿದೆ. ಲಕ್ಷ್ಮೀರ್ (3) ಮೃತಪಟ್ಟ ಮಗು.
ಎರಡನೇ ಮಗುವಿನ ಖುಷಿಯಲ್ಲಿ ಗರ್ಭಿಣಿ ಫೋಟೋ ಶೂಟ್ ಮಾಡಿಸುತ್ತಿದ್ದ ವೇಳೆ, ಸಮೀಪದಲ್ಲಿ ಆಟವಾಡುತ್ತಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ಪೂಲ್‌ಗೆ ಬಿದ್ದು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಮಗುವಿನ ವಿಚಾರದಲ್ಲಿ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಕ್ಷ್ಮೀರ್, ಜೆ.ಪಿ. ನಗರ ನಿವಾಸಿಗಳಾದ ಸ್ವಾತಿ ಹಾಗೂ ಚರಣ್ ರಾಜ್ ದಂಪತಿಯ ಪುತ್ರ. ಕೆಲಸದ ನಿಮಿತ್ತ ಒಂದು ವಾರದ ಹಿಂದೆ ವಿದೇಶಕ್ಕೆ ತೆರಳಿದ್ದ ಚರಣ್ ರಾಜ್ ಅವರಿಗೆ ಫೋಟೋ ಶೂಟ್ ಬಗ್ಗೆ ತಿಳಿಸಿ ಸ್ವಾತಿ ಸ್ನೇಹಿತೆಯೊಂದಿಗೆ ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ. ವಿದೇಶದಲ್ಲಿರುವ ಚರಣ್ ರಾಜ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಬಿಕ್ಲು ಶಿವ ಕೊ*ಲೆ ಕೇಸ್ – ಬಿಜೆಪಿ ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ



















