ಬೆಂಗಳೂರು : ಅವಳಿ ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಶಂಕೆಯ ನಡುವೆ ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ತಲಘಟ್ಟಪುರದ ವಾಜರಹಳ್ಳಿಯಲ್ಲಿ ನಡೆದಿದೆ. ಉಮಾದೇವಿ (42) ಎಂಬುವವರು ಮಕ್ಕಳ ತಾಯಿ ಎಂದು ಗುರುತಿಸಲಾಗಿದೆ.
ದಂಪತಿಗೆ ಐವಿಎಫ್ ಮೂಲಕ ಅವಳಿ ಹೆಣ್ಣು ಮಕ್ಕಳು ಜನಿಸಿದ್ದವು ಎಂದು ತಿಳಿದುಬಂದಿದೆ. ಹೆರಿಗೆ ಬಳಿಕ ಉಮಾದೇವಿ ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಸಂಜೆ ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಉಮಾದೇವಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಮನೆಗೆ ಬಂದ ಪತಿ ಪತ್ನಿಯನ್ನು ರಕ್ಷಿಸಿದ್ದಾರೆ. ತಕ್ಷಣ ಉಮಾದೇವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮಕ್ಕಳ ಸಾವಿಗೆ ನಿಖರ ಕಾರಣವೇನು ಹಾಗೂ ಘಟನೆ ನಡೆದಿರುವ ಸಂದರ್ಭದ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!



















