ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಕೆ. ಹಂಚಿಕಾಳ ಕ್ಯಾಂಪ್‌ನಲ್ಲಿ ದಾರುಣ ಘಟನೆ ನಡೆದಿದೆ. ಮನೆ ಮುಂದೆ ಬಂದಿದ್ದ ಒಂದೂವರೆ ವರ್ಷದ ಕಂದಮ್ಮನ ಮೇಲೆ ಆರೇಳು ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.
ಮೃತ ಮಗುವನ್ನು ಅನಂ (1.5) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಅನಂ ನಿದ್ದೆಯಿಂದ ಎದ್ದು ಮನೆಯ ಹೊರಗೆ ಬಂದಿದ್ದ ವೇಳೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿದೆ. ನಾಯಿಗಳು ಮಗುವನ್ನು ಎಳೆದಾಡಿ ಮನಬಂದಂತೆ ಕಚ್ಚಿದ್ದು, ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದೆ.
ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕಂದಮ್ಮ ಮೃತಪಟ್ಟಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಬೀದಿ ನಾಯಿಗಳ ಹಾವಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪತ್ನಿಯನ್ನು ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!



















