ಕುಂದಾಪುರ: ರೈಲು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬೈಂದೂರು ತಾಲೂಕಿನ ಬಡಾಕೆರೆ ಹತ್ತಿರದ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲ್ವೆ ಬ್ರಿಡ್ಜ್ ಮೇಲೆ ನಡೆದಿದೆ. ಘಟನೆಯಲ್ಲಿ ಸುಮಾರು 5 ವರ್ಷದ ಗಂಡು ಚಿರತೆ ಸಾವನ್ನಪ್ಪಿದೆ. ರೈಲು ಸಾಗುತ್ತಿದ್ದ ವೇಳೆ ಚಿರತೆ ಹಾದು ಹೋಗಲು ಯತ್ನಿಸಿದಾಗ ಬಡಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಗುರುವಾರ ಬೆಳಗಿನ ಜಾವ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಪೂರ್ಣಚಂದ್ರ, ಸೆಲ್ವ ಮುರುಗನ್, ಅರಣ್ಯ ವೀಕ್ಷಕ ಸುರೇಶ, ಗಸ್ತು ಅರಣ್ಯ ಪಾಲಕ ಮಂಜುನಾಥ ನಾಯಕ್, ರಮೇಶ್, ನಾಡ ಪಶು ವೈದ್ಯಾಧಿಕಾರಿ ಡಾ. ಹರೀಶ್.ಕೆ.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಚಿರತೆಯ ಅಂತ್ಯ ಸಂಸ್ಕಾರ ನಡೆಯಿತು.