ಐಎಎಸ್ ಅಧಿಕಾರಿ ಡಾ. ಎಂ.ಆರ್. ರವಿ ಅವರನ್ನು ಕೋಲಾರ ಜಿಲ್ಲಾ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಲ್ಲಿಯವರೆಗೆ ಜಿಲ್ಲಾಧಿಕಾರಿಯಾಗಿದ್ದ ಅಕ್ರಮ ಪಾಷಾ ಅವರನ್ನು ಕರ್ನಾಟಕ ಗೃಹ ಮಂಡಳಿಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಅಕ್ರಂ ಪಾಷಾ ಸುಮಾರು 19 ತಿಂಗಳು ಕೋಲಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಎಂ.ಆರ್. ರವಿ ಈ ಮೊದಲು ಬೆಂಗಳೂರಿನಲ್ಲಿ ಸಮಗ್ರ ಮಕ್ಕಳ ಹಕ್ಕುಗಳ ಯೋಜನೆ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಚಾಮರಾಜನಗರ ಜಿಲ್ಲಾಧಿಕಾರಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.
ಅಲ್ಲದೇ, ಗೃಹ ಮಂಡಳಿಯ ಆಯುಕ್ತರಾಗಿದ್ದ ಕವಿತಾ ಮನ್ನಿಕೇರಿ ಅವರನ್ನು ಆಯುಕ್ತರು, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.