ಕಲಬುರಗಿ : ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಬಿರಾಳ ಹಿಸ್ಸಾ ಕ್ರಾಸ್ ಬಳಿ ನಡೆದಿದೆ.
ಆಲಮೇಲ ಗ್ರಾಮದ ಯುವರಾಜ್ ಭಾಗಣ್ಣ (28) ಮೃತ ದುದೈವಿ. ಶಹಾಪುರದಿಂದ ಸಿಂದಗಿ ಕಡೆ ಹೋಗುತ್ತಿದ್ದ ಎನ್‌ಈಕೆಆರ್‌ಟಿಸ್ ಬಸ್ ಸವಾರನಿಗೆ ಗುದ್ದಿದ ರಭಸಕ್ಕೆ ತಲೆಯಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಈ ಪ್ರಕರಣವು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಚಿತ್ರದುರ್ಗದಲ್ಲಿ DYSP ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ | ತಾಯಿ ಸೇರಿ ಇಬ್ಬರು ದುರ್ಮರಣ ; ಮೂವರಿಗೆ ಗಂಭೀರ ಗಾಯ



















