ತುಮಕೂರು: ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ 21 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲಕಟ್ಟೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹೊಸಪೇಟೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿಯಾಗಿದೆ. ಬಸ್ ಬಿದ್ದ ರಭಸಕ್ಕೆ 21 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲದ ಕಟ್ಟೆಯಿಂದ ಸಾಲ್‌ಕಟ್ಟೆ ಕ್ರಾಸ್ ವರೆಗಿನ ಅವೈಜ್ಞಾನಿಕ ಹೆದ್ದಾರಿಯೇ ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಅವೈಜ್ಞಾನಿಕ ರಸ್ತೆಯಿಂದ ಪದೇ ಪದೇ ಅಪಘಾತ ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.