ಹುಬ್ಬಳ್ಳಿ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ತಂದೆ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಡಸದ ಮೆಹಬೂಬ್ ಖಾನ್ ಉಸ್ತಾದಿ (36), ಅಸ್ನೇನ್ (2) ಮೃತ ಪಟ್ಟಿದ್ದಾರೆ. ಅಜೀಜಾ ಎಂಬ ನಾಲ್ಕು ವರ್ಷದ ಹೆಣ್ಣುಮಗಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಮೆಹಬೂಬ್ ಶಿಗ್ಗಾಂವ ತಾಲೂಕಿನ ತಡಸ ಗ್ರಾಮದವರಾಗಿದ್ದು, ಕುರಿ ಮೇಯಿಸುತ್ತಿದ್ದರು. ಹುಬ್ಬಳ್ಳಿಯಿಂದ ತಡಸಕ್ಕೆ ಹೋಗುವಾಗ ಮೆಹಬೂಬ್ ಅವರು ಓವರ್ಟೇಕ್ ಮಾಡವಾಗ ಎದುರುಗಡೆಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡ ನಾಲ್ಕು ವರ್ಷದ ಬಾಲಕಿಯನ್ನು ಚಿಕಿತ್ಸೆಗೆ ನಗರದ ಕೆಎಂಸಿಆಎರ್ಐ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು



















