ಬೆಂಗಳೂರು : ಶಕ್ತಿ ಯೋಜನೆಯ ಪರಿಣಾಮವಾಗಿ ರಾಜ್ಯದ ರಸ್ತೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರೇ ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಅದರಲ್ಲಿ ಹಲವು ಗಂಭೀರ ಅಂಶಗಳು ಬಹಿರಂಗವಾಗಿವೆ.

ಶಕ್ತಿ ಯೋಜನೆಗೆ ಸರ್ಕಾರದಿಂದ ಪೂರ್ಣ ಪ್ರಮಾಣದ ಹಣ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ನಿಗಮಗಳಿಗೆ ನಗದು ಹರಿವಿನ ತೀವ್ರ ಕೊರತೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪರಿಸ್ಥಿತಿಯಿಂದ ಸಾರಿಗೆ ಇಲಾಖೆಯ ಲಕ್ಷಾಂತರ ಸಿಬ್ಬಂದಿಗಳ ಭವಿಷ್ಯ ನಿಧಿ, ಉಪದಾನ ಹಾಗೂ ಇತರ ಕಾರ್ಯಾಚರಣೆ ವೆಚ್ಚಗಳನ್ನು ಭರಿಸುವುದು ಕಷ್ಟವಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಹಲವು ಗಂಭೀರ ಅಂಶಗಳು ಬಹಿರಂಗವಾಗಿವೆ. ಶಕ್ತಿ ಯೋಜನೆಗೆ ಸರ್ಕಾರದಿಂದ ಪೂರ್ಣ ಪ್ರಮಾಣದ ಹಣ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ನಿಗಮಗಳಿಗೆ ನಗದು ಹರಿವಿನ ತೀವ್ರ ಕೊರತೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪರಿಸ್ಥಿತಿಯಿಂದ ಸಾರಿಗೆ ಇಲಾಖೆಯ ಲಕ್ಷಾಂತರ ಸಿಬ್ಬಂದಿಗಳ ಭವಿಷ್ಯ ನಿಧಿ, ಉಪದಾನ ಹಾಗೂ ಇತರ ಕಾರ್ಯಾಚರಣೆ ವೆಚ್ಚಗಳನ್ನು ಭರಿಸುವುದು ಕಷ್ಟವಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು 7,313 ಕೋಟಿ ರೂ. ಹೊಣೆಗಾರಿಕೆ ಕ್ರೋಢೀಕೃತವಾಗಿದೆ ಎಂಬುದನ್ನೂ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಬಜೆಟ್‌ನಲ್ಲಿ ಶಕ್ತಿ ಯೋಜನೆಗೆ 10,613 ಕೋಟಿ ರೂ. ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಈ ಪತ್ರ ಬರೆದಿದ್ದಾರೆ.
ಕಳೆದ ಮೂರು ವರ್ಷಗಳ ಶಕ್ತಿ ಯೋಜನೆಯ ಲೆಕ್ಕಾಚಾರವನ್ನೂ ಸಾರಿಗೆ ಸಂಸ್ಥೆಗಳ ಮುಖ್ಯಸ್ಥರು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಬಜೆಟ್‌ನಲ್ಲಿ ಅಗತ್ಯ ಅನುದಾನ ಒದಗಿಸದಿದ್ದರೆ ಸಾರಿಗೆ ನಿಗಮಗಳಿಗೆ ಆರ್ಥಿಕ ಸಂಕಷ್ಟ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಇದನ್ನೂ ಓದಿ : ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್ ಪ್ರಜೆಯ ಸ್ಫೋಟಕ ಸಾಕ್ಷ್ಯ!



















