ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರಯಾಣಿಕರು ಇಂದು ಪರದಾಡುವ ಸ್ಥಿತಿ ಎದುರಾಗಿದೆ.
ಸಾರಿಗೆ ಇಲಾಖೆಯ ಸಿಬ್ಬಂದಿಗಳಿಂದ ನಡೆಯುತ್ತಿರುವ ಮುಷ್ಕರ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದರೂ ಹೋರಾಟ ನಡೆಯುತ್ತಿದೆ. ಆದರೆ ಯಾವುದೆ ಕ್ರಮಕ್ಕೂ ಬಗ್ಗದ ನೌಕರರು, ನಿಯಮಗಳನ್ನು ಗಾಳಿಗೆ ತೂರಿ ಮುಷ್ಕರ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಸಾರಿಗೆ ಬಸ್ ಗಳ ಮುಷ್ಕರದ ಪ್ರಯೋಜನವನ್ನು ಪಡೆದುಕೊಳ್ಳುತ್ತಿರುವ ಖಾಸಗಿ ಬಸ್ಸುಗಳು ಟಿಕೆಟ್ ದರ ಹೆಚ್ಚುಸಿಕೊಂಡು, ಪ್ರಯಾಣಿಕರಿಂದ ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡುತ್ತಿವೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ.



















