ಬೆಂಗಳೂರು: ಆ.5ರಿಂದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಈ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು(ಸೋಮವಾರ) ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.
ನಾಲ್ಕು ನಿಗಮದ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಎಸ್ಮಾಂ ಜಾರಿ ಮಾಡಿದ್ದರು ಸಾರಿಗೆ ನೌಕರರು ಅದನ್ನು ಲೆಕ್ಕಿಸದೆ ಮುಷ್ಕರಕ್ಕೆ ಕರೆ ನೀಡಿದ್ದರು.
ಈ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿಗಳು ಬೆಳ್ಳಗೆ 11:45ಕ್ಕೆ ಜಂಟಿ ಕ್ರಿಯಾ ಸಮಿತಿ ಹಾಗೂ 12:30ಗೆ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಜೊತೆ ಸಭೆ ನಡೆಸಲಿದ್ದಾರೆ.



















