ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ಸಿಬ್ಬಂದಿಗಳು ಆ.05ಕ್ಕೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಅಂದೇ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ಚುನಾವಣೆ ಆಯೋಗದ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಈ ನಡುವೆ ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರ ಪ್ರತಿಭಟನೆಯಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಸಾರಿಗೆ ನೌಕರರ ಜೊತೆ ಸಭೆಗೆ ಸಾರಿಗೆ ಇಲಾಖೆ ಮುಂದಾಗಿದೆ.
ಇನ್ನು, ಮುಷ್ಕರಕ್ಕೆ ಸಂಬಂಧಿಸಿದಂತೆ ಇಂದು ಸಾರಿಗೆ ಇಲಾಖೆಯಿಂದ ಮಹತ್ವದ ಸಭೆ ನಡೆಯುತ್ತಿದ್ದು, ಸಾರಿಗೆ ಆಯುಕ್ತ ಯೋಗೀಶ್ ನೇತೃತ್ವದಲ್ಲಿ ನೌಕರರು ಸಭೆ ನಡೆಸಲಿದ್ದಾರೆ.
ಸಾರಿಗೆ ನೌಕರರು ರಾಜೀ ಸಂಧಾನಕ್ಕೆ ಒಪ್ಪದಿದೇ ಇದ್ದಲ್ಲಿ, ಪರ್ಯಾಯ ವ್ಯವಸ್ಥೆಗೆ ಸಾರಿಗೆ ಇಲಾಖೆ ಮುಂದಾಗಿದೆ ಎಂದು ಹೇಳಲಾಗಿದೆ. ಇಂದು ಸಂಜೆ ಖಾಸಗಿ ಬಸ್, ಮ್ಯಾಕ್ಸಿ ಕ್ಯಾಬ್, ಟ್ರಾವಲ್ ಅಸೋಸಿಯೇಷನ್ ಜೊತೆ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಸಾರಿಗೆ ಇಲಾಖೆ ಸರ್ಕಾರದ ಅಥವಾ ಇಲಾಖೆಯ ಸಂದಾನಕ್ಕೆ ಒಪ್ಪದೇ ಇದ್ದಲ್ಲಿ, ಖಾಸಗಿ ಬಸ್ ಗಳನ್ನು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದರತ್ತ ಮುಂದಾಗಿದೆ ಎಂಬ ಚರ್ಚೆ ಇಲಾಖಾ ಮಟ್ಟದಲ್ಲಿ ಕೇಳಿ ಬರುತ್ತಿದೆ. ಅಷ್ಟಲ್ಲದೇ, ಸಾರಿಗೆ ನೌಕರರು ಮುಷ್ಕರ ಮಾಡಿದರೆ ಖಾಸಗಿ ವಾಹನಗಳಿಗೆ ನಿಗದಿತ ಹಣ ಪಾವತಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.