ಬೆಳಗಾವಿ : ಅಕಾಲಿಕ ಗಾಳಿ, ಮಳೆಯಿಂದಾಗಿ ಕ್ರೂಸರ್ ವಾಹನದ ಮೇಲೆ ಮರ ಬಿದ್ದಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ದೊಡ್ಡಮಂಗಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಈ ವಾಹನವು ಧಾರವಾಡದಿಂದ ಹಳೇತೋರಗಲ್ಲ ಗ್ರಾಮಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಾಹನದಲ್ಲಿದ್ದವರು ಮಾತುಕತೆಗೆಂದು ಬರುತ್ತಿದ್ದರು ಎನ್ನಲಾಗಿದೆ. ಕ್ರೂಸರ್ ನಲ್ಲಿದ್ದ ಸುಮಾರು 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರಾಮದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.