ಶಿಮ್ಲಾ: ಹಿಮಾಚಲ ಪ್ರದೇಶದ ಹಲವೆಡೆ ವ್ಯಾಪಕವಾಗಿ ಬಿರುಗಾಳಿ ಬೀಸುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಬಿರುಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ 6 ಕ್ಕೂ ಅಧಿಕ ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮರ ಉರುಳಿ ವಾಹನಗಳು ಹಾಗೂ ಆಹಾರ ಮಹಿಳೆಗಳ ಮೇಲೆ ಬಿದ್ದಿದೆ. ಹೀಗಾಗಿ ಸಾವು- ನೋವು ಸಂಭವಿಸಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೊಂಬೆಗಳು ಬಿದ್ದಿದ್ದರಿಂದ ಕಾರುಗಳು ಜಖಂಗೊಂಡಿವೆ. ಈಗಾಗಲೇ ಹವಾಮಾನ ಇಲಾಖೆ ಈ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.