ವಿಜಯನಗರ : ಜಂಗಲ್ ಕಟ್ಟಿಂಗ್ ಹೆಸರಿನಲ್ಲಿ ಮರಗಳ ಮಾರಣಹೋಮ ಮಾಡಿರುವ ಘಟನೆ ಜಿಲ್ಲೆಯ ಹೊಸಪೇಟೆ ಪಟ್ಟಣದ ಕನಕದಾಸ ವೃತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ. ಮರಗಳ ರಂಬೆ-ಕೊಂಬೆಗಳನ್ನು ಮನಬಂದಂತೆ ಕತ್ತರಿಸಿರುವುದರಿಂದ ಹಸಿರಿನ ಸೊಬಗು ಹಾಳಾಗಿದ್ದು, ಮರಗಳ ಉಳಿವಿನ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಜಂಗಲ್ ಕಟ್ಟಿಂಗ್ ಕಾರ್ಯದ ವೇಳೆ ಮರಗಳ ಕೊಂಬೆಗಳನ್ನು ಕತ್ತರಿಸಿ ರಸ್ತೆಯಲ್ಲೇ ಬಿಟ್ಟಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೂ ತೊಂದರೆ ಉಂಟಾಗಿದೆ.
ಈ ಕಾರ್ಯಾಚರಣೆಯಲ್ಲಿ ನಿಯಮಗಳನ್ನು ಪಾಲಿಸದೆ ಮರಗಳಿಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿರುವ ಸ್ಥಳೀಯರು, ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಲೈನ್ ಸುರಕ್ಷತೆ ಹೆಸರಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಈ ಪ್ರಕರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ಮರಗಳಿಗೆ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!



















