ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿರುವವರಿಗೆ ಶ್ರದ್ಧಾಂಜಲಿ ಸಲ್ಲಿಸುವುದಕ್ಕಾಗಿ ಬ್ಯಾನರ್ ನಿರ್ಮಿಸಲಾಗಿತ್ತು. ಆದರೆ, ಈಗ ಈ ವಿಷಯವಾಗಿ ಎಫ್ ಐಆರ್ ದಾಖಲಾಗಿದೆ.

ಬಿಬಿಎಂಪಿಯಿಂದ ಅನುಮತಿ ಪಡೆಯದೆ ಬ್ಯಾನರ್ ಹಾಕಿದಕ್ಕೆ ಎಫ್ ಐಆರ್ ದಾಖಲಿಸಲಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಕಡೆ ಪಹಲ್ಗಾಮ್ ನಲ್ಲಿ ಮೃತಪಟ್ಟವರ ಫೋಟೋ ಹಾಕಿ ಶ್ರದ್ಧಾಂಜಲಿ ಅರ್ಪಿಸಲಾಗಿತ್ತು. ಆದರೆ, ಇದಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಯನಗರ ಬಿಬಿಎಂಪಿ ಎಇಇ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಬ್ಯಾನರ್ ಹಾಕಿದ ಅಪರಿಚಿತ ವ್ಯಕ್ತಿಯ ಮೇಲೆ ಜಯನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.