ಉಡುಪಿ : ಜಿಲ್ಲೆಯ ಹೆಜಮಾಡಿಯ ಬ್ರಹ್ಮಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ ಸಂದರ್ಭದಲ್ಲಿ ಮಹಿಳೆಯ ಕುತ್ತಿಗೆಯಿಂದಲೇ ಚಾಲಾಕಿ ಕಳ್ಳಿಯರು ಸರ ಕದ್ದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.
ಶಿವನಗರ ನಿವಾಸಿ ಕಮಲಾ (85)ರವರ ಚಿನ್ನದ ಸರ ಕಳ್ಳತನವಾಗಿದ್ದು, ಡಿ. 24ರಂದು ನೇಮ ನಡೆಯುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಮೂವರು ಚಾಲಾಕಿ ಕಳ್ಳಿಯರು ಸುಮಾರು 2 ಲಕ್ಷ ರೂ. ಮೌಲ್ಯದ 2.5 ಪವನ್ ತೂಕದ ಚಿನ್ನದ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.
ಸದ್ಯ ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಗೆ ಕಮಲಾ ಅವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು, ಕಳ್ಳಿಯರ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ | ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು!



















