ಬೆಂಗಳೂರು : “ಕೊರಗಜ್ಜ” ಚಿತ್ರ ನಿರ್ದೇಶಕ, ನಿರ್ಮಾಪಕರು ಚಿತ್ರ ಬಿಡುಗಡೆಗೂ ಮುನ್ನ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ.
ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಬಹುಕೋಟಿ ಬಜೆಟ್ ನ “ಕೊರಗಜ್ಜ” ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್, ನಿರ್ಮಾಪಕ ತ್ರಿವಿಕ್ರಮ್ ಸಪಲ್ಯ ಹಾಗೂ ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಈ ವೇಳೆ ಚಿತ್ರದ ಯಶಸ್ವಿಗೆ ದೇವರಲ್ಲಿ ಪ್ರಾರ್ಥಿಸಿದರು.