ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಎ1 ರನ್ಯಾ ರಾವ್ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ. ಅಲ್ಲದೇ, ಎ2 ತರುಣ್ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.
ಹೈಕೋರ್ಟ್ ನ್ಯಾ. ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠದಿಂದ ಈ ಕುರಿತು ಮಹತ್ವದ ಆದೇಶ ಹೊರ ಬಿದ್ದಿದೆ. ಹೀಗಾಗಿ ರನ್ಯಾಗೆ ಇನ್ನು ಒಂದು ವರ್ಷ ಜಾಮೀನು ಸಿಗುವುದು ಡೌಟ್ ಎನ್ನಲಾಗುತ್ತಿದೆ.
ಆದರೆ, ರನ್ಯಾ ಸುಪ್ರಿಂ ಕೋರ್ಟ್ ಮೊರೆ ಹೋಗಬಹುದು ಎನ್ನಲಾಗುತ್ತಿದೆ.