ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಕಾನೂನಾತ್ಮಕ ತನಿಖೆ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand Gehlot) ಸಹಿ ಹಾಕಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ತನಿಖೆಗೆ ತಡೆ ತರದಂತೆ ಕೇವಿಯಟ್ ತರಲು ಕೂಡ ಮುಂದಾಗಲಾಗಿದೆ ಎನ್ನಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದಾರೆ. ದೂರುದಾರ ಪ್ರದೀಪ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಸಿಎಂ ತಡೆಯಾಜ್ಞೆ ತರಲು ಮುಂದಾದರೆ ಅದರ ವಿರುದ್ಧ ಕೇವಿಯಟ್ ಹಾಕಲು ಕೂಡ ಈಗ ದೂರುದಾರ ಮುಂದಾಗಿದ್ದಾರೆ.
ಹೀಗಾಗಿ ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ತಲೆದೋರಿದೆ. ಪ್ರಾಸಿಕ್ಯೂಶನ್ ಗೆ (Prosecution) ರಾಜ್ಯಪಾಲರು (Governor) ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.
ಟಿ.ಜೆ. ಅಬ್ರಹಾಂರನ್ನು ಇಂದು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot), ಪ್ರಾಸಿಕ್ಯೂಶನ್ ಗೆ ದೂರು ದಾಖಲಿಸಲು ಅನುಮತಿ ನೀಡಿದ್ದಾರೆ.
ದೂರುದಾರ ಟಿ.ಜೆ ಅಬ್ರಾಹಂ ಮೇಲೆಯೇ ದೂರುಗಳಿವೆ ಎಂದು ಸಚಿವ ಸಂಪುಟ ಆರೋಪಿಸಿತ್ತು. ಮುಡಾ ಹಗರಣದ ವಿಚಾರಣೆಗಾಗಿ ರಾಜ್ಯ ಸರ್ಕಾರ ನ್ಯಾ. ದೇಸಾಯಿ ಆಯೋಗ ರಚಿಸಿದೆ. ಮೈಸೂರಿನ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್ ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಈ ಎಲ್ಲ ಬೆಳವಣಿಗೆ ಗಮನಿಸಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದಾರೆ.
ಇದಕ್ಕೂ ಮುನ್ನ ನೀಡಿದ್ದ ರಾಜ್ಯಪಾಲರ ನೋಟೀಸ್ ಗೆ ಒಂದು ಸಾಲಿನ ನಿರ್ಣಯ ಕಳಿಸಿದ ರಾಜ್ಯ ಸರ್ಕಾರ, ಅದಕ್ಕೆ ಸಂಬಂಧಿಸಿದಂತೆ 70 ದಾಖಲೆಗಳನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. 1990ರ ದಶಕದಿಂದಲೂ ಇಲ್ಲಿಯವರೆಗೂ ದಾಖಲೆ ನೀಡಿರುವ ಸರ್ಕಾರ, ಸಿದ್ದರಾಮಯ್ಯ ಪತ್ನಿಗೆ ಆಸ್ತಿ ವರ್ಗಾವಣೆ ಹಾಗೂ ಗಿಫ್ಟ್ ಡೀಡ್ ಬಗ್ಗೆ ದಾಖಲೆ ಹಾಗೂ ಸಾಕ್ಷಿ ಸಮೇತ ವಿವರಣೆ ನೀಡಿದೆ. ದೂರುದಾರ ಅಬ್ರಹಾಂ ಬಗ್ಗೆಯೂ ಮಾಹಿತಿ ನೀಡಿದೆ. ಆದರೆ, ಈ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.