ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಬೀಗಿರುವ ಡೊನಾಲ್ಡ್ ಟ್ರಂಪ್, ತಮ್ಮ ಸ್ನೇಹಿತರೊಂದಿಗೆ ಮಾತುಕತೆ ನಡೆಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಯುದ್ಧದಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ ಎನ್ನಲಾಗಿದೆ.
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಚುನಾವಣೆಯಲ್ಲಿ ಗೆದ್ದ ನಂತರ, ಟ್ರಂಪ್ 70 ಕ್ಕೂ ಅಧಿಕ ವಿಶ್ವ ನಾಯಕರೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಹಲವಾರು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.
ಅಲ್ಲದೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಕೂಡ ಮಾತುಕತೆ ನಡೆಸಿದ್ದಾರೆ. ಈ ವೇಳೆ ಎಲಾನ್ ಮಸ್ಕ್ ಕೂಡ ಇದ್ದರು ಎನ್ನಲಾಗಿದೆ. ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಇನ್ನೂ ಎರಡು ತಿಂಗಳುಗಳು ಉಳಿದಿವೆ. ಹೀಗಾಗಿ ಇದಕ್ಕೂ ಮುನ್ನ ದೇಶ-ವಿದೇಶಗಳ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸಿದ್ಧತೆ ಆರಂಭಿಸಿದ್ದಾರೆ. ಹೀಗಾಗಿ ರಷ್ಯಾ ಹಾಗೂ ಉಕ್ರೇನ್ ಯುದ್ಧ ಕೊನೆಗೊಳಿಸಲು ಮುಂದಾಗಿದ್ದಾರೆ. ಅಧ್ಯಕ್ಷರಾದ ನಂತರ ಯುದ್ಧಗಳನ್ನು ಪ್ರಾರಂಭಿಸುವುದಿಲ್ಲ, ಆದರೆ ಅವುಗಳನ್ನು ಕೊನೆಗೊಳಿಸುವುದಾಗಿ ಟ್ರಂಪ್ ಈಗಾಗಲೇ ಹೇಳಿದ್ದಾರೆ.