ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಆರೋಪಿಗಳ ಜಾಮೀನು ಭವಿಷ್ಯ ಹೊರ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಟಿ ಹಾಗೂ ನಟ ದರ್ಶನ್ ಆಪ್ತೆ ಪವಿತ್ರಾಗೌಡ ಪೋಸ್ಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಸತ್ಯ ಎಲ್ಲಕ್ಕಿಂತ ಶಕ್ತಿಯುತವಾದದ್ದು, ನ್ಯಾಯ ಸಿಕ್ಕೇ ಸಿಗುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಪವಿತ್ರಾ ಗೌಡ ಜಡ್ಜ್ ಗಳ ಮುಂದೆ ತಮ್ಮ ಜಾಮೀನು ರದ್ದು ಮಾಡುವಂತೆ ಕೋರಿದ್ದಾರೆ. ಅಲ್ಲದೇ, ತನಗೆ ಮಗು ಇದೆ. ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿ ನನ್ನದು. ಹೀಗಾಗಿ ಜಾಮೀನು ರದ್ದುಗೊಳಿಸಬಾರದು ಎಂದು ಕೋರ್ಟ್ ನಲ್ಲಿ ವಾದ ಮುಂದಿಟ್ಟಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ನಲ್ಲಿ ತೀರ್ಪು ಹೊರಬೀಳಲಿದ್ದು, ಎಲ್ಲರ ಚಿತ್ತ ಕೋರ್ಟ್ ನತ್ತ ಎನ್ನುವಂತಾಗಿದೆ.



















