ಬೆಂಗಳೂರು: ಕರಾವಳಿ ತುಳುನಾಡಿನ ದೈವಕ್ಕೆ ಅಪಮಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗೌಂಡ್ಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರದ ಒಂದನೇ ಎಸಿಜೆಎಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ರಣವೀರ್ ಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಕೋರಿ ವಕೀಲ ಪ್ರಶಾಂತ್ ಮಥಾಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿತ ನಟನ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚನೆ ನೀಡಿದೆ. ಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಗೋವಾದಲ್ಲಿ ನಡೆದ ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರ ನಟನೆಯನ್ನು ಹೊಗಳಲು ಮುಂದಾಗಿ ರಣವೀರ್ ಸಿಂಗ್ ಅವರು ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಕರೆದಿದ್ದಾರೆ ಎಂದು ತುಳುನಾಡಿನ ಜನರು ಮತ್ತು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ನಂತರ ರಣವೀರ್ ಸಿಂಗ್ ಕ್ಷಮೆ ಕೇಳಿದ್ದಾರೆ. ಅವರ ವಿರುದ್ಧ ಬೆಂಗಳೂರಿನ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸರಣಿ ಅಪಘಾತ | ನಟ ಮಯೂರ್ ಪಟೇಲ್ ವಿರುದ್ಧ



















