ಬೆಂಗಳೂರು: ನೀವು ತುಮಕೂರು ಜಿಲ್ಲೆಯವರಾ? ಎಸ್ಸೆಸ್ಸೆಲ್ಸಿ ಪಾಸಾಗಿ ನಿಮ್ಮ ಜಿಲ್ಲೆಯಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ತುಮಕೂರಿನ ಗೃಹ ರಕ್ಷಕ ದಳದಲ್ಲಿ (Home Guard Recruitment 2026) ಖಾಲಿ ಇರುವ 234 ಹೋಮ್ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ತುಮಕೂರು ಜಿಲ್ಲಾ ಗೃಹ ರಕ್ಷಕ ದಳ
ಹುದ್ದೆಗಳು: 234
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 30
ಉದ್ಯೋಗ ಸ್ಥಳ: ತುಮಕೂರು
ನಿಷ್ಕಾಮ ಸೇವೆ ಧ್ಯೇಯದ ಅಡಿಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಿ ನೇಮಕಾತಿ ಹೊಂದಿದವರಿಗೆ ಮಾಸಿಕ ಸಂಬಳ ಇರುವುದಿಲ್ಲ. ಬದಲಾಗಿ ಅವರಿಗೆ ಗೌರವ ಧನ ನೀಡಲಾಗುತ್ತದೆ. ಪೊಲೀಸ್ ಇಲಾಖೆಗೆ ಬೆಂಬಲವಾಗಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ tumkur.nic.in ವೆಬ್ ಸೈಟ್ ಗೆ ಭೇಟಿ ನೀಡಿ, ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಬಟವಾಡಿ, ತುಮಕೂರು (ಅಗ್ನಿಶಾಮಕ ದಳದ ಕಚೇರಿಯ ಹತ್ತಿರ)- 572103.



















