ಬೆಂಗಳೂರು : ನೀವು ತುಮಕೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ತುಮಕೂರು ಮಹಾನಗರ ಪಾಲಿಕೆಯಲ್ಲಿ ಖಾಲಿ (Tumkur Municipal Corporation Recruitment 2026) ಇರುವ 238 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 238 ಪೌರ ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ತುಮಕೂರು ಮಹಾನಗರ ಪಾಲಿಕೆ
ಹುದ್ದೆ ಹೆಸರು: ಪೌರ ಕಾರ್ಮಿಕರು
ಒಟ್ಟು ಹುದ್ದೆ: 238
ಉದ್ಯೋಗ ಸ್ಥಳ: ತುಮಕೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 8
ತುಮಕೂರು ಮಹಾನಗರ ಪಾಲಿಕೆಯಲ್ಲಿ 175 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅದೇ ರೀತಿ, ತಿಪಟೂರು ನಗರಸಭೆಯಲ್ಲಿ 24 ಹಾಗೂ ಶಿರಾ ನಗರಸಭೆಯಲ್ಲಿ 39 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ tumakurududc.mrc.gov.in ಗೆ ಭೇಟಿ ನೀಡಬೇಕು.
ಪೌರ ಕಾರ್ಮಿಕ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Tumkur Municipal Corporation/Municipal Council, Tiptur/Shira Office
ಇದನ್ನೂ ಓದಿ : iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?



















