ಮಲೆನಾಡು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ – ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಹೊನ್ನಾಳಿ-ಹರಿಹರ ಮಾರ್ಗವಾಗಿ ಹರಿಯುವ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ.
ಮಲೆನಾಡಿನಲ್ಲಿ ವ್ಯಾಪಕ ಮಳೆಯಿಂದ ತುಂಗಾ ಮತ್ತು ಭದ್ರಾ ಡ್ಯಾಂ ತುಂಬುವ ಹಂತಕ್ಕೆ ಬಂದಿದೆ. ಈಗಾಗಲೇ ತುಂಗಭದ್ರ ನದಿಯಿಂದ 80 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗಿದೆ. ತುಂಗಾ ಮತ್ತು ಭದ್ರಾದಿಂದ ಯಾವ ಸಮಯದಲ್ಲಾದರೂ ಮತ್ತಷ್ಟು ನೀರನ್ನು ಹೊರಕ್ಕೆ ಬಿಡಬಹುದು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ, ನದಿಗೆ ಯಾರೂ ಇಳಿಯದಂತೆ ಸೂಚನೆ ನೀಡಿದ್ದಾರೆ.
ವಾಹನ ತೊಳೆಯುವುದು, ಜಾನುವಾರ ತೊಳೆಯುವುದು ನದಿಗಿಳಿದು ಹುಚ್ಚಾಟ ಮಾಡಬೇಡಿ. ನೀರಿನ ಸೆಳೆತ ಹೆಚ್ಚಾಗಿರುವುದರಿಂದ ಅಪಾಯದ ಮಟ್ಟ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ನಾವು ಈಗಾಗಲೇ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಗೆ ಅಗತ್ಯ ತುರ್ತು ಪರಿಸ್ಥಿತಿಗೆ ಸಜ್ಜಾಗಿರುವಂತೆ ಸೂಚನೆ ನೀಡಲಾಗಿದೆ. ಅಪಾಯದ ಮಟ್ಟ ಮಿರಿ ಹರಿಯುತ್ತಿರುವುದರಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ.