ದಾವಣಗೆರೆ: ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ-ಹರಿಹರ ಮಾರ್ಗವಾಗಿ ಹರಿಯುವ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹೀಗಾಗಿ ಹರಿಹರ ತಾಲೂಕಿನ ಉಕ್ಕಡಗತ್ರಿ- ಫತ್ಯಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಪ್ರತಿ ವರ್ಷ ನದಿ ನೀರು ಹೆಚ್ಚಾದಾಗ ಈ ರಸ್ತೆಯ ಸಂಪರ್ಕ ಕಡಿತಗೊಳ್ಳುತ್ತದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದಾಗಿ ನದಿಗೆ ಯಾರೂ ಇಳಿಯದಂತೆ ಹೊನ್ನಾಳಿ, ನ್ಯಾಮತಿ, ಹರಿಹರ ತಹಸೀಲ್ದಾರ್ ಗೆ ಸೂಚನೆ ನೀಡಲಾಗಿದೆ.