ರಾಮನಗರ: ಪಾಕಿಸ್ತಾನ್ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಡದಿಯ (Bidadi) ಕಾರ್ಖಾನೆಯ ಗೋಡೆ ಮೇಲೆ ಪಾಕ್ ಪರ ಬರಹ ಬರೆದು, ಕನ್ನಡಿಗರ ಬಗ್ಗೆ ಅವಮಾನ ಮಾಡಲಾಗಿತ್ತು. ಈ ಪ್ರಕರಣದ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈಗ ತನಿಖೆ ಕೈಗೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರ ಕರ್ನಾಟಕ ಮೂಲದ ಹೈಮದ್ ಹುಸೇನ್(24) ಮತ್ತು ಸಾದಿಕ್(20) ಬಂಧಿತರು ಎನ್ನಲಾಗಿದೆ. ಬಂಧಿತ ಆರೋಪಿಗಳು, ಟೊಯೋಟಾ ಬೊಶೋಕು ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ದೇಶದ್ರೋಹದ ಆರೋಪದಡಿ ಇದೀಗ ಇಬ್ಬರನ್ನು ಬಂಧಿಸಲಾಗಿದೆ. ಗೋಡೆ ಮೇಲೆ ಪಾಕಿಸ್ತಾನ ಕೀ ಜೈ, ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆಯಲಾಗಿತ್ತು.