ದಾವಣಗೆರೆ : ದಾವಣಗೆರೆಯಲ್ಲಿ ಇಬ್ಬರು ಖತರ್ನಾಕ್ ಬೈಕ್ ಕಳ್ಳರನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿಸದ್ದು, ಬಂಧಿತರಿಂದ 16.52 ಲಕ್ಷ ರೂ. ಮೌಲ್ಯದ 30 ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಚಿಕ್ಕಮಗಳೂರಿನ ಪ್ರತಾಪ್ ಹಾಗೂ ಬಳ್ಳಾರಿ ಜಿಲ್ಲೆಯ ಬೋಜರಾಜ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಹರಿಹರದ ಇಂದಿರಾನಗರ, ವಿದ್ಯಾನಗರ ಸೇರಿದಂತೆ ಹಲವು ಕಡೆ ಬೈಕ್ ಕಳ್ಳತನ ಮಾಡಿದ್ದರು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಕಾನೂನು ಪ್ರಕ್ರಿಯೆ ಮುಗಿಸಿ ಮಾಲೀಕರಿಗೆ ಬೈಕ್‍ಗಳನ್ನು ಮರಳಿಸಿದ್ದು, ಸದ್ಯ ಪೊಲೀಸರ ಈ ಕಾರ್ಯಕ್ಕೆ ಎಸ್‍ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬೆಳಗಾವಿ | ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!















