ಕಲಬುರಗಿ: ನೀರಿನ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಕಲಬುರಗಿ ಜಿಲ್ಲೆಯ ಕೋಳಕೂರ ಗ್ರಾಮದಲ್ಲಿ ನಡೆದಿದೆ. ಗಿರೀಶ್ (3) ಮತ್ತು ಶ್ರೇಷ್ಠಾ (2) ಸಾವನ್ನಪ್ಪಿರುವ ದುರ್ದೈವ ಮಕ್ಕಳು. ಇಬ್ಬರು ಮಕ್ಕಳು ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಸಂಪ್ ಗೆ ಬಿದ್ದಿದ್ದಾರೆ. ಆದರೆ, ಇದನ್ನು ಯಾರೂ ಗಮನಿಸಿಲ್ಲ. ಮಕ್ಕಳು ಕಣ್ಮರೆಯಾಗುತ್ತಿದ್ದಂತೆ ಪರಿಶೀಲನೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.