ದೊಡ್ಡಬಳ್ಳಾಪುರ : ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಆಟ ಆಡಲು ಹೋಗಿದ್ದ ದಕ್ಷಾ(11), ಧನುಷ್(4) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಕ್ಕಳು ಮೃತಪಟ್ಟಿರುವ ಕೃಷಿ ಹೊಂಡ ರೈತ ಗುರುಮೂರ್ತಿ ಎಂಬುವವರಿಗೆ ಸೇರಿದ್ದು, ಇದಕ್ಕೆ ಕನಿಷ್ಠ ಬೇಲಿಯನ್ನೂ ಹಾಕಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಫೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!



















