ಮಂಡ್ಯ: ಸಕ್ಕರೆ ನಗರಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ತಯಾರಿ ಅಂತಿಮ ಹಂತ ಕಂಡಿದೆ. ಹೀಗಾಗಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಡಿ.20 ಮತ್ತು 21ರಂದು ರಜೆ ಘೋಷಿಸಲಾಗಿದೆ.
ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ. ಡಿ. 20ರಿಂದ 22ರ ವರೆಗೂ 3 ದಿನ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಗಣ್ಯರು ಮತ್ತು ನೊಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಭಾಗವಹಿಸಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಿಸಲಾಗಿದೆ.
ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಹತ್ತಿರ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬ ಆಚರಿಸಲು ತಯಾರಿ ನಡೆಸಲಾಗಿದೆ.